ಡೈಲಿ ವಾರ್ತೆ:JAN/19/2026

ಉಡುಪಿ: ಕೇಸರಿ ಧ್ವಜ ತೋರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಡಿಸಿ ವಿರುದ್ಧ ಆಕ್ಷೇಪ – ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕೇಸರಿ ಧ್ವಜ ತೋರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ್ದಕ್ಕೆ ವಿರೋಧದ ಮಾತುಗಳು ಕೇಳಿಬರುತ್ತಿವೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಡಿಸಿಗೆ ಕೇಸರಿ ಧ್ವಜ ಹಸ್ತಾಂತರಿಸಿದ್ದರು.

ಈ ಕುರಿತು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದ್ದು, ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ, ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.