
ಡೈಲಿ ವಾರ್ತೆ:JAN/24/2026
ಕರವೇ ಮನವಿಗೆ ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್

ಉಡುಪಿ : ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಗಿತ್ತು.

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತು ಕುಡುಕರು ಹಾಗೂ ತೃತೀಯ ಲಿಂಗಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶಾಲೆಯ ಆವರಣದಲ್ಲಿ ಎಲ್ಲೆಂದರಲ್ಲಿ ಕಾಂಡೊಮ್‌ಗಳು ಬಿದ್ದುಕೊಂಡಿರುವ ದೃಶ್ಯ ಸಾಮಾನ್ಯವಾಗಿದೆ, ಇದರಿಂದ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ಪರಿಸರದಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದೇ ಸುತ್ತಲಿನ ಸ್ಥಳ ಕತ್ತಲಾಗಿರುವುದರಿಂದ ಎಲ್ಲ ರೀತಿಯ ಕೆಟ್ಟ ಕೆಲಸಗಳು ನಡೆಯಲು ಅನುಕೂಲವಾಗಿರುತ್ತದೆ. ಸಂಬಂಧಪಟ್ಟ ಇಲಾಖೆ ವಿದ್ಯುತ್ ಲೈಟ್ ಹಾಕಿದರೂ ಕೂಡ ಅದನ್ನು ಒಡೆದು ಹಾಕಿ ರಾಜಾರೋಷವಾಗಿ ಅವ್ಯವಹಾರ ನಡೆಸುತ್ತಿದ್ದು ಈ ಜಾಗದಲ್ಲಿ ಹೊಡೆದಾಟ ಬಡಿದಾಟ ಮಾಮೂಲು ಸಂಗತಿಯಾಗಿದೆ. ಪೊಲೀಸರು ಎಷ್ಟೇ ಕ್ರಮ ವಹಿಸಿದರೂ ಅವರು ಮತ್ತೆ ಇಲ್ಲಿಯೇ ಬಂದು ಹಳೇ ಚಾಳಿ ನಡೆಸುತ್ತಿದ್ದಾರೆ. ಸಾರ್ವಜನಿಕರೂ ಸಹ ರಾತ್ರಿಯ ಹೊತ್ತು ಇಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ನೀಲೇಶ್ ಚೌಹಾನ್ ರವರನ್ನು ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್, ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ಸಯ್ಯದ್ ನಿಜಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ನಾಗರಾಜ್, ಆಶಾರವರನ್ನೊಳಗೊಂಡ ತಂಡ ಭೇಟಿ ಮಾಡಿ ಮನವಿ ಮಾಡಿತ್ತು.

ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸ್ ಇಲಾಖೆ ಸರಸ್ವತಿ ಶಾಲೆಯ ಬಳಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕಿದೆ.
ಪೊಲೀಸ್ ಇಲಾಖೆಯ ಈ ಕ್ರಮದಿಂದ ಸದ್ರಿ ಜಾಗದಲ್ಲಿ ಸಾರ್ವಜನಿಕರು ಭಯವಿಲ್ಲದೇ ನೆಮ್ಮದಿಯಿಂದ ಸಂಚರಿಸುವಂತಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಧನ್ಯವಾದ ಸಲ್ಲಿಸಿದೆ.
ಅನುಷಾ ಆಚಾರ್ ಪಳ್ಳಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮಹಿಳಾ ಘಟಕ
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ