

ಡೈಲಿ ವಾರ್ತೆ:JAN/24/2026


ಬಂಟ್ವಾಳದ ಕೇಪು ನೀರ್ಕಜೆ ಬಳಿ ಕಾರು–ಸ್ಕೂಟರ್ ಡಿಕ್ಕಿ: ತಂದೆ ಹಾಗೂ ಇಬ್ಬರು ಮಕ್ಕಳು ಗಾಯ

ಬಂಟ್ವಾಳ : ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಇಬ್ಬರು ಮಕ್ಕಳು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ನೀರ್ಕಜೆ ಎಂಬಲ್ಲಿ ಜನವರಿ 23 ರಂದು ಸಂಭವಿಸಿದೆ.
ಗಾಯಗೊಂಡವರನ್ನು ಪುಣಚ ಗ್ರಾಮದ ನಿವಾಸಿ ಕೃಷ್ಣ ನಾಯ್ಕ್ (44) ಹಾಗೂ ಅವರ ಮಕ್ಕಳಾದ ಚಿಂತನಾ ಮತ್ತು ಧೃತಿ ಎ.ಕೆ. ಎಂದು ಗುರುತಿಸಲಾಗಿದೆ.
ಕೃಷ್ಣ ನಾಯ್ಕ್ ಅವರು ಮಕ್ಕಳೊಂದಿಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ವೇಳೆ, ರಮೇಶ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮೂವರಿಗೂ ಗಾಯಗಳಾಗಿವೆ.
ಘಟನೆಯ ನಂತರ ಗಾಯಾಳುಗಳನ್ನು ತಕ್ಷಣವೇ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.