ಡೈಲಿ ವಾರ್ತೆ:JAN/26/2026

ಎಸ್‌ಡಿಟಿಯು ಮಂಗಳೂರು ನಗರ ಸಮಿತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆ:
ಸಂವಿಧಾನ ಕೇವಲ ಪುಸ್ತಕವಲ್ಲ ಅದು ಪ್ರಜಾಪ್ರಭುತ್ವದ ಜೀವ – SDTU ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್

ಮಂಗಳೂರು, ಜ.26: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮವು ಮಂಗಳೂರು ನಗರದ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ರಹಿಮಾನ್ ಬೋಳಿಯಾರ್ ವಹಿಸಿಕೊಂಡರು. ಅವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಭಾಷಣ ಮಾಡಿ ಸಂವಿಧಾನ ಕೇವಲ ಒಂದು ಪುಸ್ತಕವಲ್ಲ ಅದು ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಕಾರ್ಮಿಕರಾದ ನಾವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯ ಎಂಬ ಮೌಲ್ಯಗಳನ್ನು ಎತ್ತಿ ಹಿಡಿದು ನಮ್ಮ ಹಕ್ಕುಗಳನ್ನು ಸಂವಿಧಾನಾತ್ಮಕವಾಗಿ ಪಡೆದುಕೊಳ್ಳಲು ಶಕ್ತಿಮೀರಿದ ಪ್ರಯತ್ನ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಖಾನ್, ಜಿಲ್ಲಾ ಕೋಶಾಧಿಕಾರಿ ಝುಬೈರ್ ಮಳಲಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ನಾಯಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಎಸ್‌ಡಿಟಿಯು ಮಂಗಳೂರು ಸೌತ್ ವಲಯದ ಕೋಶಾಧಿಕಾರಿ ಶರೀಫ್ ಕುತ್ತಾರ್ ಸ್ವಾಗತ ಭಾಷಣ ಮಾಡಿದರು.
ಅಂತ್ಯದಲ್ಲಿ ನವಾಝ್ ಕುಪ್ಪೆಪದವು ಧನ್ಯವಾದ ಅರ್ಪಿಸಿದರು.