
ಡೈಲಿ ವಾರ್ತೆ:JAN/26/2026
ಗಣರಾಜ್ಯೋತ್ಸವದ ಪ್ರಯುಕ್ತ ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಹಣ್ಣು ಹಂಪಲು ವಿತರಣೆ

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಬಾಣಂತಿಯರಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ರವರ ನೇತೃತ್ವದಲ್ಲಿ ಸೋಮವಾರ ನಡೆಯಿತು.

77ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತ ಚೌಕಟ್ಟನ್ನು ರೂಪಿಸಿದ ಈ ದಿನ ನಮಗೆಲ್ಲರಿಗೂ ಐತಿಹಾಸಿಕ ದಿನವಾಗಿದೆ. ಇಂದು ಪ್ರತಿಯೊಬ್ಬ ಭಾರತೀಯ ಪ್ರಜೆ ತನ್ನ ಹಕ್ಕು ಮತ್ತು ಕರ್ತವ್ಯಗಳನ್ನು ಮನನ ಮಾಡಿಕೊಳ್ಳಬೇಕು ಎಂದರು. ಬಳಿಕ ಕರವೇ ಪದಾಧಿಕಾರಿಗಳು ಹಾಗೂ ಸದಸ್ಯರು ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಹಣ್ಣು ಹಂಪಲು ವಿತರಿಸಿ 77ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ಸಯ್ಯದ್ ನಿಜಾಮ್, ಸುಧೀರ್ ಪೂಜಾರಿ, ಅಲ್ಫೋನ್ಸ್ ಮಿನೇಜಸ್, ಸಿದ್ದಣ್ಣ, ದೇವಕಿ ಬಾರ್ಕೂರು, ಉಡುಪಿ ತಾಲೂಕು ಅಧ್ಯಕ್ಷರಾದ ಸತೀಶ್ ಸನಿಲ್, ಜಿಲ್ಲಾ ಸದಸ್ಯರಾದ ಆಶಾ, ಸವಿತಾ, ವಿಶಾಲ ಮೊದಲಾದವರು ಉಪಸ್ಥಿತರಿದ್ದರು.