ಡೈಲಿ ವಾರ್ತೆ:JAN/27/2026

ಸಾಲಿಗ್ರಾಮದಲ್ಲಿ ರಸ್ತೆ ಸುರಕ್ಷತೆ–ಸೈಬರ್ ಅಪರಾಧ ಜಾಗೃತಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೋಟ, ಜ.28 : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ–2026ರ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್‌, ಉಡುಪಿ ಪೊಲೀಸ್ ಉಪವಿಭಾಗ, ಬ್ರಹ್ಮಾವರ ಪೊಲೀಸ್ ವೃತ್ತದ ಕೋಟ ಪೊಲೀಸ್ ಠಾಣೆ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದು ಮನೆ ಕಣ್ಣಿನ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಸ್ತೆ ನಿಯಮಗಳ ಪಾಲನೆಯ ಮಹತ್ವ, ಅಪಘಾತಗಳನ್ನು ತಪ್ಪಿಸುವ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸೈಬರ್ ಅಪರಾಧಗಳಿಂದ ದೂರವಿರುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತದೆ. ಜೊತೆಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಪರೀಕ್ಷೆ, ದಂತ ಪರೀಕ್ಷೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಲಿದೆ.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಶ್ರೀ ಪ್ರಭು ಡಿ.ಟಿ. ಅವರು ಭಾಗವಹಿಸಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮವು ಜ.28ರಂದು ಬೆಳಿಗ್ಗೆ 9.00 ಗಂಟೆಗೆ ಸಾಲಿಗ್ರಾಮದ ಚಿತ್ರಪಾಡಿ ಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ವಠಾರದಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.