
ಡೈಲಿ ವಾರ್ತೆ:ಜನವರಿ/28/2026
ಕುಂದಾಪುರ| ಚಿನ್ನಾಭರಣ ಅಂಗಡಿಯಲ್ಲಿ ಕಳ್ಳನ ಕೈಚಳಕ – ₹1.25 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿದ ಅಪರಿಚಿತ

ಕುಂದಾಪುರ: ನಗರದ ಶಾಸ್ತ್ರೀ ಸರ್ಕಲ್ ಬಳಿಯ SPG Gold and Diamond ಅಂಗಡಿಯಲ್ಲಿ ಅಪರಿಚಿತನೊಬ್ಬ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಶೀರೂರು ಬುಕಾರಿ ಕಾಲೋನಿಯ ನಿವಾಸಿ ಮೊಹ್ಮದ್ ಕಾಸಿಮ್ (42) ಅವರು ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಿನಾಂಕ 27-01-2026 ರಂದು ಸಂಜೆ ಸುಮಾರು 5.56ರ ವೇಳೆಗೆ, ಸುಮಾರು 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ, ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿದವರಂತೆ ನಟಿಸಿ, ಅವರ ಗಮನ ತಪ್ಪಿಸಿ ಸುಮಾರು 9 ಗ್ರಾಂ ತೂಕದ, ₹1,25,000 ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ಪಡೆದ ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 05/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 305 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪತ್ತೆಗೆ ಪೊಲೀಸ್ ತಂಡ ತನಿಖೆ ಮುಂದುವರಿಸಿದೆ.