

ಡೈಲಿ ವಾರ್ತೆ:ಜನವರಿ/30/2026


ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡಿದ ಆರೋಪ: ಬ್ರಹ್ಮಾವರದಲ್ಲಿ ಇಬ್ಬರ ಬಂಧನ

ಬ್ರಹ್ಮಾವರ: ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಮತ್ತು ಅಶಾಂತಿ ಉಂಟುಮಾಡುವ ಉದ್ದೇಶದಿಂದ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹರಡಿದ ಆರೋಪದಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 19/2026 ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೋಟೇಶ್ವರ ಅಂಕದ ಕಟ್ಟೆಯ “ಕಲ್ಪತರು” ಕಾಮಧೇನು ಸಂಸ್ಥೆ ಉದ್ದಿಮೆ ಕೆ.ನಾಗರಾಜ್(62), ಹಾಗೂ ಬ್ಯಾಂಕ್ ಉದ್ಯೋಗಿ ಸಂತೋಷ್ ಕುಮಾರ್ ಶೆಟ್ಟಿ(56) ವಡ್ಡರ್ಸೆ ಎಂದು ಗುರುತಿಸಲಾಗಿದೆ.
ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 196(1), 353(2) ಜೊತೆಗೆ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆ ಉಡುಪಿ ಉಪವಿಭಾಗದ ಡಿವೈಎಸ್ಪಿ ಪ್ರಭು ಡಿ.ಟಿ. ಅವರ ನಿರ್ದೇಶನ ಹಾಗೂ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ನಡೆದಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ಉಪ ನಿರೀಕ್ಷಕ ಅಶೋಕ ಮಾಳಾಬಗಿ ನೇತೃತ್ವದಲ್ಲಿ ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿಯವರು ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಯನ್ನು ಕದಡುವ ಯಾವುದೇ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.