
ಡೈಲಿ ವಾರ್ತೆ: ಫೆ./03/2026
ತ್ರಾಸಿ| ವಾಕಿಂಗ್ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಕುಂದಾಪುರ, ಫೆ.3: ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಪ್ರದೇಶದಲ್ಲಿ ವಾಕಿಂಗ್‌ಗೆ ತೆರಳಿದ್ದ ವೃದ್ಧೆಯೊಬ್ಬರ ಕುತ್ತಿಗೆಯಿಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಪರಾರಿಯಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತ್ರಾಸಿಯ ಸಣ್ಣಕುಂಬ್ರಿ ಡೋನ್ ಬೋಸ್ಕೋ ಶಾಲೆ ರಸ್ತೆಯಲ್ಲಿ ವಾಕಿಂಗ್‌ಗೆ ತೆರಳಿದ್ದ ಸೀತಾ (83) ಎಂಬ ವೃದ್ಧೆಯ ಬಳಿ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಸುಮಾರು 22.470 ಗ್ರಾಂ ತೂಕದ, ಅಂದಾಜು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ 309(4) BNS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ತನಿಖೆ ಮುಂದುವರಿದಿದೆ.
ವೃದ್ಧರು ಹಾಗೂ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.