ಡೈಲಿ ವಾರ್ತೆ: ಫೆ./05/2026

ಸಾಮಾಜಿಕ ಜಾಲತಾಣದಲ್ಲಿ
ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ದ್ವೇಷ ಬರಹ – ಮಣಿಪಾಲದಲ್ಲಿ ಇಬ್ಬರು ಯುವಕರ ಬಂಧನ

ಮಣಿಪಾಲ: ಸಾಮಾಜಿಕ ಜಾಲತಾಣದಲ್ಲಿ ಕಾರ್ಕಳದ ವಿವಾಹಿತ ಹಿಂದೂ ಮಹಿಳೆ ಹಾಗೂ ಮುಸ್ಲಿಂ ಯುವಕನ ಕುರಿತು ವ್ಯಂಗ್ಯಾತ್ಮಕವಾಗಿ ಪೋಸ್ಟ್ ಹಾಕಿ, ಧರ್ಮ–ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡಲು ಯತ್ನಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಿತೇಶ್ (20) ಮತ್ತು ಹಿತೇಶ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಬರಹವನ್ನು ಪ್ರಕಟಿಸಿ, ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 105/2025 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ಗಳು 353(2) ಮತ್ತು 56 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದು, ಸಾಮಾಜಿಕ ಜಾಲತಾಣಗಳ ದುರುಪಯೋಗದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.