ಡೈಲಿ ವಾರ್ತೆ: ಫೆ./06/2026

ಬ್ರಹ್ಮಾವರ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ಚಂದ್ರಶೇಖರ ಶೆಟ್ಟಿ ಆಯ್ಕೆ

ಬ್ರಹ್ಮಾವರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬ್ರಹ್ಮಾವರ ತಾಲೂಕು ಶಾಖೆಯ 2024–2029ರ ಅವಧಿಯ ತಾಲೂಕು ಕಾರ್ಯಕಾರಿ ಸಮಿತಿಗೆ ಮಣೂರು ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಚಂದ್ರಶೇಖರ ಶೆಟ್ಟಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಸಂಘಟನೆಯ ಹಿತದೃಷ್ಟಿಯಿಂದ ಹಾಗೂ ಸಂಘದ ಬೈಲಾ ನಿಯಮಗಳ ಪ್ರಕಾರ, ತಾಲೂಕು ಅಧ್ಯಕ್ಷರ ದತ್ತಾಧಿಕಾರದ ಮೇರೆಗೆ ಈ ನಾಮನಿರ್ದೇಶನವನ್ನು ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಮಾಡಲಾಗಿದೆ.

ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಚಂದ್ರಶೇಖರ ಶೆಟ್ಟಿಯವರ ಅನುಭವ, ಸೇವಾ ಮನೋಭಾವ ಮತ್ತು ಸಂಘಟನಾ ಸಾಮರ್ಥ್ಯ ಸಂಘದ ಬಲವರ್ಧನೆಗೆ ನೆರವಾಗಲಿದೆ ಎಂಬ ವಿಶ್ವಾಸವನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಸಹೋದ್ಯೋಗಿಗಳು ಹಾಗೂ ಸರ್ಕಾರಿ ನೌಕರರು ಶ್ರೀ ಚಂದ್ರಶೇಖರ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.