

ಡೈಲಿ ವಾರ್ತೆ: ಫೆ./06/2026
ವಿದ್ವಾನ್ ಮಂಜೇಶ್ ಎಂ. ರವರಿಗೆ ಪಿಎಚ್.ಡಿ ಪದವಿ ಪ್ರದಾನ

ಬೆಂಗಳೂರು: ಫೆ.06: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಗ್ರಾಮದ ನಿವಾಸಿ ಪೂಜಾರ್ ಮನೆತನದ ಶ್ರೀಮತಿ ಲೀಲಾವತಿ ಮತ್ತು ಶ್ರೀ ಎಸ್. ಮೈಲಾರಯ್ಯ ದಂಪತಿಯ ಪುತ್ರನಾದ ಮಂಜೇಶ್ ಎಂ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವೇದಾಂತ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಂಜೇಶ್ ಎಂ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವೇದಾಂತ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಶರತ್ ಚಂದ್ರ ಸ್ವಾಮಿ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ಕ್ರಿಟಿಕಲ್ ಸ್ಟಡಿ ಆಫ್ ದಿ ನ್ಯಾಯಾಸ್ ಆಫ್ ಪೂರ್ವ ಮೀಮಾಂಸಾ, ಪರ್ಟೇನಿಂಗ್ ಟು ದಿ ಭಾಷ್ಯ-ರತ್ನ-ಪ್ರಭಾ ಗ್ಲಾಸ್ ಆಫ್ ದ ಶಾಂಕರ ಬ್ರಹ್ಮಸೂತ್ರಭಾಷ್ಯಮ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ವಾನ್ ಮಂಜೇಶ್ ರವರು ಸತತ 12 ವರ್ಷಗಳ ಕಾಲ ಸಾಂಪ್ರದಾಯಿಕ ಗುರುಕುಲ ಶಿಕ್ಷಣವನ್ನು ಪಡೆದಿದ್ದು, ಸಂಸ್ಕೃತ ಮತ್ತು ವೇದಾಂತ ಶಾಸ್ತ್ರಗಳಲ್ಲಿ ಗಾಢವಾದ ಪಾಂಡಿತ್ಯವನ್ನು ಹೊಂದಿದ್ದಾರೆ. ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಂಸ್ಕೃತ ವಿಭಾಗದಲ್ಲಿ ಪೂರ್ಣಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಇವರ ಶೈಕ್ಷಣಿಕ ಸಾಧನೆಗಾಗಿ ಡಾ. ಮಂಜೇಶ್ ಎಂ. ಅವರಿಗೆ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಮಾಚೋಹಳ್ಳಿ ಗ್ರಾಮಸ್ಥರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.