ಡೈಲಿ ವಾರ್ತೆ: ಫೆ./20/2026

ಮೆಸ್ಕಾಂ ಮಾಣಿ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸತೀಶ್ ಪೂಜಾರಿ ನೇಮಕ

ಬಂಟ್ವಾಳ : ಮೆಸ್ಕಾಂ ಮಾಣಿ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಚ್ಚಿದಾನಂದ (ಸತೀಶ್) ಪೂಜಾರಿ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ.

ಸತೀಶ್ ಪೂಜಾರಿ ಅವರು ಕಳೆದ ಬಾರಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾಗಿ ಪ್ರಥಮ ಅವಧಿಯಲ್ಲಿ ಅಧ್ಯಕ್ಷರಾಗಿ, ದ್ವಿತೀಯ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.