

ಡೈಲಿ ವಾರ್ತೆ: ಫೆ./20/2026

ಫೆ. 22 ರಂದು ಪಂಚವರ್ಣದ ‘ರೈತರೆಡೆಗೆ ನಮ್ಮ ನಡಿಗೆ’ 52ನೇ ಸರಣಿ: ಹಿರಿಯ ಕೃಷಿಕ ಆನಂದ ಮೊಗವೀರ ಕೃಷಿ ಪುರಸ್ಕಾರಕ್ಕೆ ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 52ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಫೆ.22ರ ಭಾನುವಾರ ಬೆಳಿಗ್ಗೆ 10.45ಕ್ಕೆ ನಡೆಯಲಿದೆ.
ಕೃಷಿ ಕ್ಷೇತ್ರದ ಹಿರಿಯ ಸಾಧಕ ಕೋಟ ಮಣೂರು ಪಡುಕರೆ ದಾರೋಜ್ಜಿಮನೆ ಆನಂದ ಮೊಗವೀರ ಇವರಿಗೆ ಕೃಷಿ ಪುರಸ್ಕಾರ ನೀಡಿ ಗೌರವಿಸಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.