ಡೈಲಿ ವಾರ್ತೆ: ಫೆ./28/2026

ಬ್ರಹ್ಮಾವರ| ಹಿರಿಯ ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ಆರೂರು ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಬ್ರಹ್ಮಾವರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರು ಹೆಂಡತಿ ಓರ್ವ ಪುತ್ರ ಹಾಗೂ ತಂದೆ,ತಾಯಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಶೇಷಗಿರಿ ಭಟ್ ಅವರ ನಿಧನ ಸುದ್ದಿ ಪತ್ರಿಕಾ ವಲಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಆಘಾತ ಮೂಡಿಸಿದೆ. ಅವರ ಅಗಲಿಕೆಗೆ ಬ್ರಹ್ಮಾವರ ಪತ್ರಕರ್ತ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು, ಅವರ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.