

ಡೈಲಿ ವಾರ್ತೆ: ಮಾ./03/2026

ಕುಂದಾಪುರದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ಮಾ.2ರಂದು ಮಧ್ಯಾಹ್ನ ನಡೆದ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಹೆಮ್ಮಾಡಿ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಅತಿವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಕಾವೇರಿ (46) ಅವರಿಗೆ ಎದೆ, ಬೆನ್ನು ಹಾಗೂ ಕೈಗೆ ಗಾಯಗಳಾಗಿದ್ದು, ಸವಾರ ಶಿವರಾಜ್ ಅವರಿಗೆ ತೀವ್ರ ರಕ್ತಗಾಯಗಳಾಗಿವೆ. ಇನ್ನೊಂದು ಬೈಕ್ ಸವಾರ ಕಾರ್ತಿಕೇಯನಿಗೂ ಗಾಯವಾಗಿದೆ.
ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.