ಡೈಲಿ ವಾರ್ತೆ: ಮಾ./06/2026

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ ನಾಯಕ್ ಹೃದಯಾಘಾತದಿಂದ ನಿಧನ

ಉಡುಪಿ, ಮಾ.6: ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಶೃಂಗೇರಿ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ನಾಯಕ್ (52) ಅವರು ಮಾರ್ಚ್ 6ರಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಒಳಗೊಂಡ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ತೀರ್ಥಹಳ್ಳಿ, ಶೃಂಗೇರಿ, ಉಡುಪಿ, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಲವು ಪ್ರಮುಖ ರಸ್ತೆ ಕಾಮಗಾರಿಗಳ ಅನುಷ್ಠಾನದಲ್ಲಿ ಮಂಜುನಾಥ ನಾಯಕ್ ಅವರ ಸೇವೆ ಗಮನಾರ್ಹವಾಗಿತ್ತು.

ಸರಳ ಸ್ವಭಾವ, ಸ್ನೇಹಶೀಲ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಎಲ್ಲರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದ ಮಂಜುನಾಥ ನಾಯಕ್ ಅವರ ಅಗಲಿಕೆಗೆ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಪರಿಚಿತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.