

ಡೈಲಿ ವಾರ್ತೆ: ಮಾ./07/2026

ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಮೇಶ್ ಮೆಂಡನ್ ನೇಮಕ

ಕೋಟ : ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ರಮೇಶ್ ಮೆಂಡನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಅವರ ಶಿಫಾರಸ್ಸಿನ ಮೇರೆಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ್ ಭಂಡಾರಿ ಅವರ ಆದೇಶದ ಮೇರೆಗೆ ಈ ನೇಮಕಾತಿ ನಡೆದಿದೆ.
ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ರಮೇಶ್ ಮೆಂಡನ್ ಅವರು ತಕ್ಷಣವೇ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಹಾಗೂ ಸ್ಥಳೀಯ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಮೆಂಡನ್ ಅವರ ನೇಮಕ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.