

ಡೈಲಿ ವಾರ್ತೆ: ಮಾ./09/2026

ಅಲ್ವಂಕಿ ಘಾಟ್‌ನಲ್ಲಿ ಖಾಸಗಿ ಬಸ್ ಪಲ್ಟಿ: ಐದು ಪ್ರಯಾಣಿಕರಿಗೆ ಗಾಯ

ಭಟ್ಕಳ, ಮಾ.9: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರ್ಸೊಪ್ಪ ಸಮೀಪದ ಅಲ್ವಂಕಿ ಘಾಟ್‌ನಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐದು ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮಾಹಿತಿಯಂತೆ, “ಶ್ರೀ ಕುಮಾರ್” ಎಂಬ ಖಾಸಗಿ ಬಸ್ ಭಟ್ಕಳದಿಂದ ಹೊನ್ನಾವರ ಮಾರ್ಗವಾಗಿ ಬೆಂಗಳೂರಿನತ್ತ ತೆರಳುತ್ತಿತ್ತು. ಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ಗೇರ್ಸೊಪ್ಪ ಸಮೀಪದ ಅಲ್ವಂಕಿ ಘಾಟ್‌ನಲ್ಲಿ ಸಾಗುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ತಕ್ಷಣವೇ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.