ಡೈಲಿವಾರ್ತೆ:13/ಮಾರ್ಚ್/2026

ಮಾ. 14 ರಂದು ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

ಬಂಟ್ವಾಳ : ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವು ಮಾರ್ಚ್ 14 ಶನಿವಾರದಂದು ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ನಲ್ಲಿ ನಡೆಯಲಿದೆ.

ಸಂಜೆ 5.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಮಾನಾಥ ರೈ ಅಧ್ಯಕ್ಷತೆ ವಹಿಸುವರು.

ಮಂಗಳೂರು ಶಾಂತಿ ಪ್ರಕಾಶನದ ಅದ್ಯಕ್ಷ ಮುಹಮ್ಮದ್ ಕುಂಞಿ , ಶ್ರೀ ಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ , ಬಂಟ್ವಾಳ ವಲಯ ಪ್ರಧಾನ ಧರ್ಮಗುರು ರೆ.ಫಾ. ವಿಕ್ಟರ್ ಡಿಸೋಜಾ, ನೆಹರು ನಗರ ಮಸೀದಿ ಖತೀಬ್ ದಾವೂದ್ ಇಸ್ಮಾಯಿಲ್ ಫೈಝಿ ಹಾಗೂ ಹಲವಾರು ರಾಜಕೀಯ ಸಾಮಾಜಿಕ ಮುಖಂಡರು
ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ‌