

ಡೈಲಿವಾರ್ತೆ:15/ಮಾರ್ಚ್/2026


ರಾಜ್ಯದ ಎರಡು ಕ್ಷೇತ್ರಗಳಿಗೆ ಉಪಸಮರ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

ನವದೆಹಲಿ: ಕರ್ನಾಟಕದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಭಾನುವಾರ ಚಾಲನೆ ನೀಡಿದೆ.
ಏಪ್ರಿಲ್ 9ರಂದು ಈ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 4ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಐದು ರಾಜ್ಯಗಳ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ರಾಜ್ಯಗಳ ಉಪಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು.
ರಾಜ್ಯದ ಇಬ್ಬರು ಹಿರಿಯ ರಾಜಕಾರಣಿಗಳ ಅಗಲಿಕೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಈಗ ಚುನಾವಣೆ ಎದುರಾಗಿದೆ.
ದಾವಣಗೆರೆ ದಕ್ಷಿಣ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ,
ಬಾಗಲಕೋಟೆ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ಶಾಸಕ ಹೆಚ್.ವೈ. ಮೇಟಿ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿತ್ತು.
ರಾಷ್ಟ್ರೀಯ ಮಟ್ಟದ ಚುನಾವಣೆಗಳ ಘೋಷಣೆ
ಇದೇ ವೇಳೆ ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚ್ಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನೂ ಪ್ರಕಟಿಸಿದೆ. ಇದರೊಂದಿಗೆ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಹಾಗೂ ತ್ರಿಪುರಾ ರಾಜ್ಯಗಳ ಉಪಚುನಾವಣಾ ದಿನಾಂಕಗಳನ್ನೂ ಆಯೋಗ ಅಂತಿಮಗೊಳಿಸಿದೆ.