

ಡೈಲಿವಾರ್ತೆ:16/ಮಾರ್ಚ್/2026


ಅಬುಧಾಬಿಯಲ್ಲಿ ಕ್ಷಿಪಣಿ ದಾಳಿ: ಕಾರಿಗೆ ಅಪ್ಪಳಿಸಿ ಪ್ಯಾಲೆಸ್ಟೀನ್ ನಾಗರಿಕ ಸಾವು

ಅಬುಧಾಬಿ: ನೆರೆಯ ರಾಷ್ಟ್ರಗಳ ಮೇಲೆ ಇರಾನ್ ದಾಳಿ ಮುಂದುವರಿದಿರುವ ಬೆನ್ನಲ್ಲೇ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿ ಅಬುಧಾಬಿಯಲ್ಲಿ ಕ್ಷಿಪಣಿ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರ ಅಬುಧಾಬಿಯ ಹೊರವಲಯದಲ್ಲಿರುವ ಅಲ್ ಬಹಿಯಾ ಪ್ರದೇಶದಲ್ಲಿ ಸಾಗುತ್ತಿದ್ದ ಕಾರಿನ ಮೇಲೆ ಕ್ಷಿಪಣಿಯೊಂದು ಅಪ್ಪಳಿಸಿದ್ದು, ಈ ದಾಳಿಯಲ್ಲಿ ಕಾರಿನಲ್ಲಿದ್ದ ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕೆ ಭದ್ರತಾ ಪಡೆಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದಾಳಿಯಿಂದ ಕಾರು ಸಂಪೂರ್ಣವಾಗಿ ಹಾನಿಗೊಂಡಿರುವುದು ತಿಳಿದುಬಂದಿದೆ.
ಈ ಘಟನೆ ಬಗ್ಗೆ ಅಬುಧಾಬಿ ಮಾಧ್ಯಮ ಕಚೇರಿ ಪ್ರಕಟಣೆ ಹೊರಡಿಸಿದ್ದು, ಮೃತ ವ್ಯಕ್ತಿಯ ಗುರುತು ಹಾಗೂ ದಾಳಿಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿಸಿದೆ.