

ಡೈಲಿವಾರ್ತೆ:22/ಮಾರ್ಚ್/2026


ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅತ್ಯಾಚಾರ ಪ್ರಕರಣ ದಾಖಲು

ಬೆಳ್ತಂಗಡಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಅಮಾನತುಗೊಂಡಿದ್ದ ಮೂಡಬಿದಿರೆಯ ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಗಂಭೀರವಾದ ಅತ್ಯಾಚಾರ ಆರೋಪ ಕೇಳಿಬಂದಿದೆ.
ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐದು ವರ್ಷಗಳ ಕಾಲ ದೌರ್ಜನ್ಯ:
ದೂರುದಾರ ಮಹಿಳೆಯು ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2018 ರಿಂದ 2023 ರ ನಡುವಿನ ಅವಧಿಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅವರು ಸಂತ್ರಸ್ತೆಯ ಮನೆಗೆ ಬಂದು ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.
ಹಣ ವಸೂಲಿ ಮತ್ತು ಜೀವ ಬೆದರಿಕೆ:
ಕೇವಲ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಆರೋಪಿ ಇನ್ಸ್‌ಪೆಕ್ಟರ್ ಸಂತ್ರಸ್ತೆಗೆ ಬೆದರಿಕೆ ಹಾಕಿ ಹಣ ವಸೂಲಿ (Extortion) ಕೂಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯು ಮಾರ್ಚ್ 21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ವೇಣೂರು ಪೊಲೀಸರು ಸಂದೇಶ್ ಪಿಜಿ ವಿರುದ್ಧ
ಸೆಕ್ಷನ್ 376(2)(a)(1), 376(2)(n)384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.