ಡೈಲಿವಾರ್ತೆ:25/ಮಾರ್ಚ್/2026

ದಾವಣಗೆರೆ ಉಪಚುನಾವಣೆ ಕಾವು: ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಿತ್ ಶೆಟ್ಟಿ ವಡ್ಡರ್ಸೆ ನೇಮಕ

ದಾವಣಗೆರೆ: ಬಾಗಲಕೋಟೆಯ ಮೇಟಿ ಹಾಗೂ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ದಾವಣಗೆರೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ, ಬಿಜೆಪಿ ಪಕ್ಷದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ ಪ್ರತಿಸ್ಪರ್ಧಿಯಾಗಿ ನಿಲ್ಲಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ.

ಚುನಾವಣಾ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲು ಮತ್ತು ಸಂಘಟನೆ ಬಲಪಡಿಸಲು ಉಸ್ತುವಾರಿಗಳನ್ನು ನೇಮಿಸುವುದು ರಾಜಕೀಯ ಪಕ್ಷಗಳ ಸಾಮಾನ್ಯ ತಂತ್ರವಾಗಿದೆ. ಅದರಂತೆ, ಕರಾವಳಿ ಭಾಗದ ಪ್ರಭಾವಿ ಯುವ ಕಾಂಗ್ರೆಸ್ ನಾಯಕ ಅಜಿತ್ ಶೆಟ್ಟಿ ವಡ್ಡರ್ಸೆ ಅವರನ್ನು ದಾವಣಗೆರೆ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಯುವ ಕಾಂಗ್ರೆಸ್ ಘಟಕದ ಮಂಜುನಾಥ್ ಗೌಡ ಈ ನೇಮಕಾತಿ ಆದೇಶವನ್ನು ನೀಡಿದ್ದು, ತಕ್ಷಣವೇ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅಜಿತ್ ಶೆಟ್ಟಿ ವಡ್ಡರ್ಸೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳು ಹಾಗೂ ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಜೊತೆಗೆ, ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.