


ಡೈಲಿವಾರ್ತೆ:07/ಏಪ್ರಿಲ್ /2026

ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬೌದ್ಧ ಪೂರ್ಣಿಮಾ ಜಯಂತಿಯ ಪೂರ್ವಭಾವಿ ಸಭೆ

ವಿಜಯನಗರ: ಏ.07: ವಿಜಯನಗರ ಜಿಲ್ಲಾ ಮಟ್ಟದ ಛಲವಾದಿ ಸಮುದಾಯದ ಸಭೆಯನ್ನು ಹರಪನಹಳ್ಳಿ ತಾಲೂಕು ಪ್ರವಾಸಿ ಮಂದಿರದಲ್ಲಿ ನಡೆಯಿತು. ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ವತಿಯಿಂದ ನಡೆದ ಯಶಸ್ವಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಭೀಮ ನಮನಗಳನ್ನು ಸಲ್ಲಿಸಲಾಯಿತು.

ಮುಂದುವರೆದು, ಇದೇ ತಿಂಗಳು ಏಪ್ರಿಲ್ 14ರಂದು ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅರ್ಥಗರ್ಭಿತವಾಗಿ ಮತ್ತು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಮೇ 1ರಂದು ಬೌದ್ಧ ಪೂರ್ಣಿಮಾ ಜಯಂತಿಯನ್ನು ಜಿಲ್ಲಾ ಕೇಂದ್ರ ಹೊಸಪೇಟೆ ನಗರದಲ್ಲಿ ಬುದ್ಧ ಬಾಬಾಸಾಹೇಬ್ ಅಂಬೇಡ್ಕರ್ ಬಸವಣ್ಣನವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
ಇನ್ನೂ ಹರಪನಹಳ್ಳಿ ತಾಲೂಕು ಛಲವಾದಿ ಮಹಾಸಭಾದ ನೂತನ ತಾಲೂಕು ಸಮಿತಿಯನ್ನ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಾಗಳಿ ಬಸವರಾಜ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾಕರ್, ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಧಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಹಾಗೂ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಬಣ್ಣದಮನೆರವರು, ಜಿಲ್ಲಾ ಮತ್ತು ತಾಲ್ಲೂಕು ಛಲವಾದಿ ಮಹಾಸಭಾದ ಮುಖಂಡರು, ಹಿರಿಯ-ಕಿರಿಯರು ಜಿಲ್ಲಾ ಸಮಿತಿ ಸದಸ್ಯರು, ಮಹಿಳೆಯರು ಮತ್ತಿತರರು ಪಾಲ್ಗೊಂಡಿದ್ದರು.
ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾ ಸಮುದಾಯದ ಸಭೆಯನ್ನು ಹರಪನಹಳ್ಳಿ ತಾಲೂಕು ಪ್ರವಾಸಿ ಮಂದಿರದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಬಣ್ಣದಮನೆರವರು ನೂತನ ಪದಾಧಿಕಾರಿಗಳಿಗೆ ಆಯ್ಕೆ ಪತ್ರ ನೀಡುವುದರೊಂದಿಗೆ ಶುಭ ಹಾರೈಸಿದರು ನೀಡಿದರು.