


ಡೈಲಿವಾರ್ತೆ:10/ಏಪ್ರಿಲ್ /2026

ಪಿಯುಸಿ ಪರೀಕ್ಷೆ : ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿಗೆ 92 ಶೇಕಡಾ ಫಲಿತಾಂಶ, 54 ಮಂದಿಗೆ ಡಿಸ್ಟಿಂಕ್ಷನ್

ಬಂಟ್ವಾಳ : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಎಪ್ರಿಲ್ 9 ರಂದು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಗೂಡಿನಬಳಿ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜು ಈ ಬಾರಿ 92.05 ಫಲಿತಾಂಶ ದಾಖಲಿಸಿದೆ.
ಕಾಲೇಜಿನ 264 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 243 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಈ ಪೈಕಿ 54 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿರುತ್ತಾರೆ. ಕಲಾ ವಿಭಾಗದಲ್ಲಿ 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 60 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 142 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 134 ಮಂದಿ ಉತ್ತೀರ್ಣರಾಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 49 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.
ಕಲಾ ವಿಭಾಗದಲ್ಲಿ ಹೇಮಶ್ರೀ 562 ಅಂಕಗಳು, ವಾಣಿಜ್ಯ ವಿಭಾಗದಲ್ಲಿ ಭವಿತ್ 579 ಅಂಕಗಳು ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರೇಕ್ಷಾ 576 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ ಎಂದು ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.