




ಡೈಲಿವಾರ್ತೆ:11/ಏಪ್ರಿಲ್ /2026


ನಮ್ಮ ನಾಡ ಒಕ್ಕೂಟದಿಂದ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರ

ಕುಂದಾಪುರ: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ನಮ್ಮ ನಾಡ ಒಕ್ಕೂಟ (ರಿ)’ ಹಾಗೂ ‘ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್, ಕುಂದಾಪುರ’ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗವಹಿಸಿ, ಬ್ಯಾರಿಕೇಡ್‌ಗಳನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷ ಹುಸೇನ್ ಹೈಕಾಡಿ, ಪ್ರಧಾನ ಕಾರ್ಯದರ್ಶಿ ಮೌ. ಝಮಿರ್ ಅಹ್ಮದ್ ರಶಾದಿ, ಖಜಾಂಚಿ ಪೀರು ಮೊಹಮ್ಮದ್ (ಉಡುಪಿ), ಕುಂದಾಪುರ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನೂಪ್ ನಾಯಕ್, ಸುಧಾ ಪ್ರಭು, ಎನ್‌ಎನ್‌ಒ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ (ಬಿಎಸ್‌ಎಫ್), ಸಂಘಟನಾ ಕಾರ್ಯದರ್ಶಿ ನಿಹಾರ್ ಅಹ್ಮದ್, ಸದಸ್ಯರಾದ ಶಾಬನ್ ಹಂಗಳೂರ್, ಮನ್ಸೂರ್ ಇಬ್ರಾಹಿಂ, ಕುಂದಾಪುರ ಘಟಕದ ಅಧ್ಯಕ್ಷ ಜಮಾಲ್ ಗುಲ್ವಾಡಿ, ಹೆಬ್ರಿ ಘಟಕದ ಅಧ್ಯಕ್ಷ ಅನ್ವರ್ ಹೊಸಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಮಾಜದ ಸಹಭಾಗಿತ್ವದಿಂದ ಸಂಚಾರ ವ್ಯವಸ್ಥೆ ಸುಧಾರಣೆಗೆ ಕೈಜೋಡಿಸುವ ಇಂತಹ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಸುರಕ್ಷಿತ ಪ್ರಯಾಣಕ್ಕೆ ಸಹಕಾರಿ ಆಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.