ಡೈಲಿವಾರ್ತೆ:14/ಏಪ್ರಿಲ್ /2026

ಕುಂದಾಪುರ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ

​ಕುಂದಾಪುರ: ಇಲ್ಲಿನ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಭಾರತ ಸಂವಿಧಾನದ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ಮಹಾನಾಯಕ. ಇಂದು ನಾವೆಲ್ಲರೂ ಶಾಂತಿ ಮತ್ತು ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಅವರು ರಚಿಸಿದ ಬಲಿಷ್ಠ ಸಂವಿಧಾನವೇ ಪ್ರಮುಖ ಕಾರಣ. ಅಂಬೇಡ್ಕರ್ ಅವರ ಬದುಕು ಮತ್ತು ಹೋರಾಟ ಪ್ರತಿಯೊಬ್ಬ ವ್ಯಕ್ತಿಗೂ ಮಾರ್ಗದರ್ಶಿಯಾಗಿದೆ ಎಂದು ನುಡಿದರು.

​ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

​ಈ ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ. ಆಚಾರ್ಯ, ಸಿಬಿಎಸ್‌ಇ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.