



ಡೈಲಿವಾರ್ತೆ:16/ಏಪ್ರಿಲ್ /2026

ಎ.18 ರಂದು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಎಪ್ರಿಲ್ 18 ರಂದು ಸಂಜೆ 4.00 ಕ್ಕೆ ಬಿ.ಸಿ.ರೋಡಿನ ಡಾ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಎಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಇದೇ ವೇಳೆ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗುವುದು. ಬಂಟ್ವಾಳ ತಾಲೂಕಿನ
ಬ್ಯಾರಿ ಭಾಷೆ ಮತ್ತು ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕು ಎಂದು ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.